Saturday, December 14, 2024
HomeHOMEಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ! 20th Chief minister of karnataka...

ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ! 20th Chief minister of karnataka basavraj bommai

 

ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ! 20th Chief minister of karnataka basavraj bommai.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ರಾಜ್ಯ ಬಿಜೆಪಿ ಸಚಿವ ಸಂಪುಟ ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕರನ್ನು ಆಯ್ಕೆ ಮಾಡಲಾಗಿದೆ .

ಬೆಂಗಳೂರು: ರಾಜ್ಯದ ನೂತನ (CM) ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ರಾಜ್ಯ ಬಿಜೆಪಿ ಸಚಿವ ಸಂಪುಟ ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕರನ್ನು ಆಯ್ಕೆ ಮಾಡಲಾಯಿತು. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ 28-7-2021 ರಂದು ಮಧ್ಯಾಹ್ನ 3:30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ಪಾರ್ಟಿಯ 90 ಕ್ಕೂ ಅಧಿಕ ಶಾಸಕರು ಹಾಜರಾಗಿದ್ದರು. ಬಿ ಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನದಲ್ಲಿ ನೂತನ ಸಿಎಂ ಆಯ್ಕೆ ಮಾಡಲಾಗಿದೆ. ಬೊಮ್ಮಾಯಿ ಅವರ ಆಯ್ಕೆ ಮೂಲಕ ಬಿ. ಎಸ್. ಯಡಿಯೂರಪ್ಪ ಅವರ ಕೈ ಮೇಲಾದಂತಾಗಿದೆ. ಬೊಮ್ಮಾಯಿ ಅವರು ಯಡಿಯೂರಪ್ಪ ಅವರ ಆಪ್ತರಲ್ಲಿ ಒಬ್ಬರಾಗಿದ್ದರು. ಇದೀಗ ಯಡಿಯೂರಪ್ಪ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.ಎರಡು ದಿನದೊಳಗೆ ಸಂಪುಟ ರಚನೆ!
ಬಸವರಾಜ ಬೊಮ್ಮಾಯಿ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಬಳಿಕ ಮುಂದಿನ ಎರಡು ದಿನಗಳಲ್ಲಿ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಲಾಗುತ್ತದೆ ಎಂದು ಸೂತ್ರಗಳಿಂದ ಹೇಳಲಾಗುತ್ತಿದೆ.
ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಮತ್ತು ಅತಿವೃಷ್ಟಿಯಿಂದ ಪ್ರವಾಹ ಸ್ಥಿತಿ ಇರುವುದರಿಂದ ಹೆಚ್ಚುಕಾಲ ಪೂರ್ಣ ಪ್ರಮಾಣದ ಸಂಪುಟವಿಲ್ಲದೆ ಕೆಲಸ ಮಾಡುವುದು ಸಾಧ್ಯವಿಲ್ಲ. ಹೀಗಾಗಿ ಮುಂದಿನ ಮೂರು ದಿನಗಳಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ಜತೆಗೆ ಪೂರ್ಣ ಪ್ರಮಾಣದ ಸಂಪುಟವೂ ರಚನೆ ಆಗಲಿದೆ.ಬಸವರಾಜ್ ಬೊಮ್ಮಾಯಿ ನಿವಾಸದಲ್ಲಿ ಸಂಭ್ರಮಾಚರಣೆ!
ರಾಜ್ಯದಲ್ಲಿ ಹೊಸ ಸಿಎಂ ಘೋಷಣೆ ಆಗುತ್ತಿದ್ದಂತೆಯೇ ಹುಬ್ಬಳ್ಳಿಯ‌‌ ಬಸವರಾಜ್ ಬೊಮ್ಮಾಯಿ ಅವರ ನಿವಾಸದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ‌ ತೊಡಗಿದ್ದಾರೆ. ಸಿಎಂ ಬೊಮ್ಮಾಯಿ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ‌ ಸಂಭ್ರಮಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments