Monday, December 23, 2024
HomeHOMEಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿಕೆಯ ಬಳಿಕ ನಿರ್ದೇಶಕ ಪ್ರೇಮ್ ಬೇಸರ !! Director Prem S...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿಕೆಯ ಬಳಿಕ ನಿರ್ದೇಶಕ ಪ್ರೇಮ್ ಬೇಸರ !! Director Prem S Reacted on Challenging Star Darshan Statement

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿಕೆಯ ಬಳಿಕ ನಿರ್ದೇಶಕ ಪ್ರೇಮ್ ಬೇಸರ !! Director Prem S Reacted on Challenging Star Darshan Statement

ನಟ ದರ್ಶನ್ ಅವರು ಇವತ್ತು ಮಧ್ಯಾಹ್ನ ನಡೆಸಿರುವ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಪ್ರೇಮ್ ಅವರ ಹೆಸರನ್ನು ಮಧ್ಯ ತಂದಿದ್ದಾರೆ.

 ಇದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ ನಿರ್ದೇಶಕ ಜೋಗಿ ಪ್ರೇಮ್ , ಅವರು ಸ್ಟನ್ನ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ಮಾಡುತ್ತ ದರ್ಶನ್ ಬಗ್ಗೆ ಇರುವ ತನ್ನೊಳಗಿನ ಬೇಸರವನ್ನು ವ್ಯಕ್ತಪಡಿಸಿದ್ದಾರೆ . ಈ ಪೋಸ್ಟ್ ನಲ್ಲಿ ಏನೆಲ್ಲ ಬರೆದಿದ್ದಾರೆ ಎಂದು ಇಲ್ಲಿದೆ ಓದಿ. 

“ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ  ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ. ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಾಸ್ ನೀಡಿ  ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ”.

-ಪ್ರೇಮ್ ಎಸ್ 

ಇದಿಷ್ಟು ನಿರ್ದೇಶಕ ಪ್ರೇಮ್ ಅವರ ಮಾತುಗಳು . ಆದರೆ ದರ್ಶನ್ ಅವರ ಈ ವಿವಾದಗಳು ಯಾವಾಗ ಬಗೆಹರಿಯುತ್ತೋ ಕಾದು ನೋಡಬೇಕಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments