Saturday, December 14, 2024
HomeHOME13 ವರ್ಷಗಳಾದ್ರೂ IPL ನಲ್ಲಿ ಕಪ್ ಗೆಲ್ಲದ ಆರ್‌ಸಿಬಿ – ರಹಸ್ಯ ಬಿಚ್ಚಿಟ್ಟ ಡರೇನ್ ಸ್ಯಾಮಿ

13 ವರ್ಷಗಳಾದ್ರೂ IPL ನಲ್ಲಿ ಕಪ್ ಗೆಲ್ಲದ ಆರ್‌ಸಿಬಿ – ರಹಸ್ಯ ಬಿಚ್ಚಿಟ್ಟ ಡರೇನ್ ಸ್ಯಾಮಿ

ಅಬುಧಾಬಿ : 13ನೇ ಆವೃತ್ತಿಯ Indian Premier League (IPL) ಟೂರ್ನಿಯಲ್ಲೂ RCB ತಂಡ ವೈಫಲ್ಯ ಅನುಭವಿಸಿದ್ದು, 2020ರ Qualifier ಪಂದ್ಯದಲ್ಲಿ ಸೋಲುಂಡು ಟೂರ್ನಿಯಿಂದ ಔಟ್ ಆಗಿದೆ. 


ಆರ್‌ಸಿಬಿ ಟೀಮ್ IPL ಆರಂಭವಾಗಿ 13 ವರ್ಷಗಳು ಕಳೆದರೂ ಸಹ ಒಂದು ಕೂಡ ಕಪ್ ಗೆಲ್ಲದ ಹಿಂದಿನ ಕಾರಣವನ್ನು ವೆಸ್ಟ್ ಇಂಡೀಸ್ ಆಟಗಾರ ಡರೇನ್ ಸ್ಯಾಮಿ ಬಿಚ್ಚಿಟ್ಟಿದ್ದಾರೆ.

ಬಹುವರ್ಷಗಳ ಬಳಿಕ ಆರ್‌ಸಿಬಿ Play off  ಗೆ ಪ್ರವೇಶ ಪಡೆದರೂ ಬೆಂಗಳೂರು ಆಟಗಾರರ ಕಪ್ ಗೆಲ್ಲುವ ಬಹು ವರ್ಷಗಳ ಕನಸು ಈಡೇರಲಿಲ್ಲ. 

Qualifier ಪಂದ್ಯದಲ್ಲಿ ಸನ್‍ರೈಸರ್ಸ್ ವಿರುದ್ಧ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ನಿರಸ ಪ್ರದರ್ಶನ ತೋರಿದ RCB ಸೋಲುಂಡಿತ್ತು.

IPL ಟೂರ್ನಮೆಂಟ್ ಗಳಲ್ಲಿ ಬೆಂಗಳೂರು ಟೀಮ್ ಪ್ರದರ್ಶನವನ್ನು ಗಮನಿಸಿದರೆ ತಂಡದ ಬೌಲಿಂಗ್ ಪಡೆಯಲ್ಲೇ ಹೆಚ್ಚು ಸಮಸ್ಯೆಯಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಡರೇನ್ ಸ್ಯಾಮಿ, bats man ಪಂದ್ಯಗಳನ್ನು ಗೆಲ್ಲಿಸಿ ಕೊಡುತ್ತಾರೆ. ಆದರೆ bowling ಪಡೆ ಟೂರ್ನಿಯನ್ನೇ ಗೆಲ್ಲಿಸುತ್ತದೆ. ಇದು ಬದಲಾವಣೆಯಾಗದ ಹೊರತು ಕಪ್ ಗೆಲ್ಲಲು ಆಗಲ್ಲ ಎಂದು ಟ್ವೀಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ವರ್ಷದ RCB bowling ಪ್ರದರ್ಶನವನ್ನು ಗಮನಿಸುವುದಾದರೆ, ಯಜುವೇಂದ್ರ ಚಹಲ್ ಮಾತ್ರ ಸ್ಥಿರ Sstable Performance ನೀಡಿದ್ದಾರೆ. ಪ್ರತಿ ಪಂದ್ಯದಲ್ಲೂ ತಂಡಕ್ಕಾಗಿ ವಿಕೆಟ್ ಪಡೆದ ಚಹಲ್, ಈ ವರ್ಷದ IPLಟಾಪ್ ವಿಕೆಟ್ ಕಿತ್ತ ಆಟಗಾರರ ಲಿಸ್ಟ್  ನಲ್ಲಿ 4ನೇ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಚಹಲ್ 15 ಮ್ಯಾಚ್ ನಲ್ಲಿ 21 ವಿಕೆಟ್ ಉರುಳಿಸಿದ್ದಾರೆ. ಉಳಿದಂತೆ ಬೇರೆ ಯಾವುದೇ ಬಾಲರ್ Sstable Performance ನೀಡಲು ವಿಫಲರಾಗಿದ್ದಾರೆ. ಯುವ ವೇಗಿ ನವದೀಪ್ ಸೈನಿ ಕೂಡ ನಿರಾಸೆ ಮೂಡಿಸಿದ್ದಾರೆ.

ಸತತ ನಾಲ್ಕು ಪಂದ್ಯ ಸೋತರೂ play off  ಪ್ರವೇಶಿಸಿದ್ದ RCB ನಿರ್ಣಾಯಕ ಮ್ಯಾಚ್ ನಲ್ಲಿಯೂ ಸೋತು ಟೂರ್ನಿಯಿಂದ ಔಟಾಗಿದೆ. ನಿನ್ನೆಯ ಪಂದ್ಯದಲ್ಲಿ ಟಾಸ್ ಸೋತ RCB ಮೊದಲು bating  ಮಾಡಿ 20 over ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿತ್ತು. ಸುಲಭದ ಗುರಿ ಬೆನ್ನತ್ತಿದ್ದ Sunrisers ಕೇನ್ ವಿಲಿಯಮ್ಸನ್‍ರ ಅರ್ಧ ಶತಕದ ನೆರವಿನಿಂದ ಇನ್ನಿಂಗ್ಸ್ ನ ಅಂತಿಮ over ನಲ್ಲಿ ಗೆಲುವು ಪಡೆಯಿತು. ಆ ಮೂಲಕ 2nd Qualifier ಪಂದ್ಯಕ್ಕೆ ಪ್ರವೇಶ ಪಡೆಯಿತು. sunday 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಡೆಲ್ಲಿ ಮತ್ತು ಸನ್‍ರೈಸರ್ಸ್ ನಡುವೆ ಹಣಾಹಣಿ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments