Anna Bhagya Yojana 2023- Money Deposit Checking Website Link : ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಇನ್ನೂ ಬಂದಿಲ್ವಾ.? ಹಣ ಜಮೆಯಾಗಿದೆಯೇ ಎಂದು ತಿಳಿಯೋದು ಹೇಗೆ ಗೊತ್ತಾ ??

Anna Bhagya Yojana 2023- ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೇ ಎಂದು ತಿಳಿಯಲು ಹೊಸ website ಲಾಂಚ್ ಮಾಡಿದ ರಾಜ್ಯ ಸರಕಾರ.


ಅನ್ನಭಾಗ್ಯ ಯೋಜನೆಯ (Anna Bhagya Yojana) ಫಲಾನುಭವಿಗಳಿಗೆ ನೇರ ನಗದು ವರ್ಗಾಯಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಹಣವು ಖಾತೆಗೆ ವರ್ಗಾವಣೆಯಾಗಿದೆಯೇ ಎಂಬ ಮಾಹಿತಿಯನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಆಹಾರ ಇಲಾಖೆ ವೆಬ್‌ಸೈಟ್‌ ಲಿಂಕ್‌ ಬಿಡುಗಡೆ ಮಾಡಿದೆ.
ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್‌ಸೈಟ್‌ ಲಿಂಕ್‌ ಬಿಡುಗಡೆ ಮಾಡಿದೆ.


ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddharamaiah) ಅವರು ಈ ಕ್ರಮಕ್ಕೆ ಚಾಲನೆ ನೀಡಿ ಫಲನುಭವಿಗಳ ಖಾತೆ ಹಣ ವರ್ಗಾವಣೆ ಮಾಡಿದರು. ಸದ್ಯ ಎರಡು ಜಿಲ್ಲೆಗಳ ಜನರಿಗೆ ಹಣ ವರ್ಗಾವಣೆಯಾಗುತ್ತಿದ್ದು, ಹಂತ ಹಂತವಾಗಿ ವಿವಿಧ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಿದೆ.
ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ನೀಡುವ ವೆಬ್‌ಸೈಟ್‌ ಲಿಂಕ್‌ ಇಲ್ಲಿದೆ: https://ahara.kar.nic.in/status1/status_of_dbt.aspx ಈ ಲಿಂಕ್‌ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು. ವೆಬ್‌ಸೈಟ್‌ಗೆ ಭೇಟಿ ನೀಡಿದ ಬಳಿಕ ವರ್ಷ, ತಿಂಗಳು ಹಾಗೂ ಪಡಿತರ ಚೀಟಿಯ ಆರ್‌ಸಿ (RC CARD) ಸಂಖ್ಯೆಯನ್ನು ನಮೂದು ಮಾಡಬೇಕು. ಆ ಬಳಿಕ ಗೋ ಎಂಬ ಆಯ್ಕೆಯನ್ನು ಮಾಡಿದರೆ ಮಾಹಿತಿ ಲಭ್ಯವಾಗಲಿದೆ.


ಅನ್ನಭಾಗ್ಯ ಹಣ ವರ್ಗಾವಣೆ ಕುರಿತು ಏನೆಲ್ಲಾ ಮಾಹಿತಿ ಲಭ್ಯವಿದೆಯೋ ಅದನ್ನು ತಿಳಿದುಕೊಳ್ಳಲು ವೆಬ್‌ಸೈಟ್‌ನಲ್ಲಿ ಪರಿಶೀಲನೆ ಮಾಡಬಹುದು. ವೆಬ್‌ಸೈಟ್‌ಗೆ ಭೇಟಿ ನೀಡಿದ ಬಳಿಕ ನಿಮ್ಮ ಅಂದಾಜು ಮತ್ತು ಪಡಿತರ ಚೀಟಿಯ ಆರ್‌ಸಿ ಸಂಖ್ಯೆಯನ್ನು ನಮೂದಿಸಬೇಕು. ಆಗ ಮಾಹಿತಿ ಲಭ್ಯವಾಗುವುದು.
ಅನ್ನಭಾಗ್ಯ ಯೋಜನೆಯ ಹಣವು ಕುಟುಂಬ ಮುಖ್ಯಸ್ಥರ ಖಾತೆಗೆ ಬರಲಿದೆ. ಒಂದು ಕೆಜಿ ಅಕ್ಕಿಗೆ 36 ರೂಪಾಯಿ ಹಾಗೂ ಐದು ಕೆಜಿ ಅಕ್ಕಿಗೆ ತಲಾ ಐದು ಕೆಜಿ ಅಕ್ಕಿಗೆ ಹಣ ವರ್ಗಾವಣೆ ಮಾಡಲಾಗಿದೆ. ಇನ್ನು ಹಣ ಜಮೆಯಾದ ಕೂಡಲೇ ಬ್ಯಾಂಕ್‌ನಿಂದ ಸಂದೇಶ ಬರುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಂತ್ಯೋದಯ ಕಾರ್ಡ್‌ಗಳ ಅಂದಾಜು 23 ಲಕ್ಷ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 34 ಕೋಟಿ ರೂಪಾಯಿ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಕುಮುದ ತಿಳಿಸಿದ್ದಾರೆ.


ರಾಜ್ಯದಲ್ಲಿ ಮೊದಲ ಹಂತದಲ್ಲಿಯೇ ಮೈಸೂರು ಜಿಲ್ಲೆಯ ಜನರಿಗೆ ಅನ್ನಭಾಗ್ಯ ಯೋಜನೆಯ ಹಣ ದೊರೆತಿದೆ. ಜಿಲ್ಲೆಯಲ್ಲಿ 50432 ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ಧಾರರ ಒಟ್ಟು 2,17,199 ಫಲಾನುಭವಿಗಳು, 6,61,290 ಬಿಪಿಎಲ್‌ ಕಾರ್ಡ್‌ಗಳ ಒಟ್ಟು 20,83,627 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ವಿತರಿಸಲಾಗಿದೆ. ಇನ್ನುಳಿದ ಐದು ಕೆಜಿ ಅಕ್ಕಿಗೆ ಬದಲಾಗಿ (1 ಕೆಜಿಗೆ 34 ರೂಪಾಯಿ ನಂತೆ) 170 ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 7,11,722 ಕಾರ್ಡ್‌ಗಳ ಅಂದಾಜು 23 ಲಕ್ಷ ಜನರು ನಗದು ಪಡೆದಿದ್ದಾರೆ ಎಂದು ವಿಜಯ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.

How to Earn Money From Youtube : ಯೂಟ್ಯೂಬ್ ಮೇಲೆ ಕನ್ನಡಲ್ಲಿ ವಿಡಿಯೋ ಹಾಕಿ ದುಡ್ಡು ಸಂಪಾದಿಸುವುದು ಹೇಗೆ ? ನೀವು ಸಂಪಾದಿಸಬಹುದು ಇಲ್ಲಿದೆ ಸಂಪೂರ್ಣ ಮಾಹಿತಿ

Leave a Comment